ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಇಲಾಖೆಯ ದೃಷ್ಠಿಕೋನ:

ಪಂಚಾಯತ್‌ ರಾಜ್‌ ಸಂಸ್ಥೆಗಳ ಬಲರ್ವದನೆಯೊಂದಿಗೆ ಸದೃಡ ಹಾಗು ಸಮಗ್ರ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿ.

 

ಧ್ಯೇಯ:

  1. ಜೀವನಮಟ್ಟವನ್ನು ಉತ್ತಮಪಡಿಸಲು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಗ್ರಾಮೀಣ ಜನರನ್ನು ಸಮರ್ಥರನ್ನಾಗಿಸುವುದು.
  2. ಗ್ರಾಮೀಣ ಪ್ರದೇಶದ ಬಡಜನರಿಗೆ ಮೂಲಭೂತ ಸೌಕರ್ಯ ಹಾಗೂ ಸಾಮಾಜಿಕ / ಆರ್ಥಿಕ ಪ್ರಗತಿಗೆ ಅವಕಾಶಗಳನ್ನು ಕಲ್ಪಿಸುವುದು.
  3. ಪಂಚಾಯತ್‌ ರಾಜ್‌ ಸಂಸ್ಥೆಗಳು ಜವಾಬ್ದಾರಿಯುತವಾಗಿ ಹಾಗೂ ಸಮರ್ಥವಾಗಿ ಕಾರ್ಯ ನಿರ್ವಹಿಸುವಂತೆ ಮಾಡುವುದು.
  4. ಗ್ರಾಮೀಣ ಜನರ ಜೀವನೋಪಾಯಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಉದ್ಯೋಗ ಸೃಜಿಸಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ನಿರುದ್ಯೋಗಿ ಯುವಕ / ಯುವತಿಯರಿಗೆ ತರಬೇತಿ, ಉದ್ಯೋಗ ಹಾಗೂ ಸ್ವ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ ಸಾಲ ಒದಗಿಸಿ ಅವಕಾಶಗಳನ್ನು ಕಲ್ಪಿಸುವುದು.

 

ಉದ್ದೇಶಗಳು:

  1. ಸ್ವ ಉದ್ಯೋಗ, ಕೂಲಿ ಉದ್ಯೋಗ ಒದಗಿಸುವ ಕಾರ್ಯಕ್ರಮಗಳ ಮೂಲಕ ಬಡತನ ನಿರ್ಮೂಲನೆ.
  2. ಗ್ರಾಮೀಣ ಕುಟುಂಬವೊಂದಕ್ಕೆ ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಉದ್ಯೋಗವನ್ನು ಒದಗಿಸುವುದರ ಮೂಲಕ ಅವರ ಜೀವನೋಪಾಯದ ಆಧಾರಗಳನ್ನು ಬಲಪಡಿಸುವುದು.
  3. ಗುಣಾತ್ಮಕ ಹಾಗೂ ದೀರ್ಘ ಬಾಳಿಕೆ ಬರುವಂತಹ ಗ್ರಾಮೀಣ ಮೂಲಭೂತ ಸೌಕರ್ಯಗಳನ್ನು ನಿಗದಿತ ಸಮಯದಲ್ಲಿ ಸೃಜಿಸುವುದರ ಮೂಲಕ ಫಲಾನುಭವಿಯ ಅವಶ್ಯಕತೆಯನ್ನು ಪೂರೈಸುವುದು.
  4. ಎಲ್ಲಾ ಗ್ರಾಮೀಣ ಜನವಸತಿಗಳಿಗೆ ಸಾಕಷ್ಟು ಶುದ್ಧ ಕುಡಿಯುವ ನೀರಿನ ಪೂರೈಕೆ.
  5. ಸ್ಥಳೀಯ ಸಂಸ್ಥೆಗಳ ಅಂದರೆ ಪಂಚಾಯತ್‌ ರಾಜ್‌ ಸಂಸ್ಥೆಗಳ ಸಬಲೀಕರಣ.
  6. ಪಂಚಾಯತ್‌ ರಾಜ್‌ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ಅಧಿಕಾರಿ/ ಸಿಬ್ಬಂದಿಯ ಸಾಮರ್ಥ್ಯಾಭಿವೃದ್ಧಿ.
  7. ಸ್ಥಳೀಯ ಆದ್ಯತೆ, ನಿರ್ಧಾರಕ್ಕನುಗುಣವಾಗಿ ಸೇವೆ ನೀಡುವಲ್ಲಿ ಮತ್ತು ಸಾರ್ವಜನಿಕ ಸಂಪನ್ಮೂಲಗಳ ನಿರ್ವಹಣೆಯಲ್ಲಿ ಗ್ರಾಮ ಪಂಚಾಯತಿಗಳು ನೀಡುವ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸುವುದು.
  8. ಗ್ರಾಮೀಣಾಭಿವೃದ್ಧಿಯಲ್ಲಿ ಆಳವಾದ ಮತ್ತು ಸಮಗ್ರ ದೂರದೃಷ್ಠಿತ್ವವನ್ನು ಹೊಂದುವ ಮೂಲಕ ಬಲಿಷ್ಠ ಗ್ರಾಮ ಸಮುದಾಯಗಳನ್ನು ಅಭಿವೃದ್ಧಿಪಡಿಸುವುದು.
  9. ಗ್ರಾಮೀಣ ಇಂಧನ ಕ್ಷೇತ್ರದಲ್ಲಿ ಅರಿವು ಮೂಡಿಸುವುದು ಹಾಗೂ ಈ ಕ್ಷೇತ್ರದಲ್ಲಿ ಆಗುವ ಹೊಸ ಅಭಿವೃದ್ಧಿಯನ್ನು ಪ್ರಸರಣ ಮಾಡುವುದು.
  10. ಪಶ್ಚಿಮ ಘಟ್ಟಗಳ ಪ್ರದೇಶ ಅಭಿವೃದ್ಧಿಗೊಳಿಸುವುದು.
  11. ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯಲ್ಲಿರುವ ತೊಡಕುಗಳನ್ನು ನಿವಾರಿಸುವುದು.
  12. ಗ್ರಾಮಗಳ ನೈರ್ಮಲ್ಯ ಸುಧಾರಣೆ.
  13. ಪಾರದರ್ಶಕ ಆಡಳಿತಕ್ಕೆ ಒತ್ತು ನೀಡುವುದು.

ಇತ್ತೀಚಿನ ನವೀಕರಣ​ : 08-06-2020 12:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080