ಅಭಿಪ್ರಾಯ / ಸಲಹೆಗಳು

ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ

ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಗ್ರಾಮೀಣ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛ ಭಾರತ್‌ ಮಿಷನ್‌ ಅನುಷ್ಠಾನದ ನೋಡಲ್‌ ಇಲಾಖೆ ಯಾಗಿದೆ.  ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಅನುಷ್ಠಾನಕ್ಕೆ ಭೌತಿಕ ಮೂಲಸೌಕರ್ಯಗಳನ್ನು (ಸ್ವಚ್ಛ ಸಂಕೀರ್ಣ ಘಟಕಗಳು/ಶೆಡ್‌ಗಳು) ಸ್ಥಾಪಿಸಲು ನೋಡಲ್‌ ಇಲಾಖೆಯಿಂದ  ಗ್ರಾ.ಪಂ. ಗಳಿಗೆ ಸಹಕಾರ ನೀಡಲಾಗುತ್ತಿದೆ. 

 

ಗ್ರಾಮ ಪಂಚಾಯತ್‌ಗಳಲ್ಲಿ ಘನ ದ್ರವ ತ್ಯಾಜ್ಯದ ನಿರ್ವಹಣೆಗಾಗಿ ಗ್ರಾಮ ಪಂಚಾಯತಿ ಮಟ್ಟದ ಸ್ವಸಹಾಯ ಸಂಘದ ಮಹಿಳೆಯರ ಒಕ್ಕೂಟಗಳನ್ನು ತೊಡಗಿಸಿಕೊಳ್ಳಲು 2021-22 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾಗಿದೆ. 

 

ಘನ-ದ್ರವ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಕಾರ್ಯಾಚರಣೆ ಮತ್ತು ನಿರ್ವಹಣೆ ಗುತ್ತಿಗೆಯನ್ನು ತೆಗೆದುಕೊಳ್ಳಲು ಗ್ರಾಮ ಪಂಚಾಯತಿ ಮಟ್ಟದ ಸ್ವಸಹಾಯ ಸಂಘದ ಮಹಿಳೆಯರ ಒಕ್ಕೂಟಗಳ ಮತ್ತು ಗ್ರಾಮ ಪಂಚಾಯತ್‌ಗಳ ನಡುವೆ ಒಪ್ಪಂದಗಳನ್ನು ಮಾಡಿಕೊಳ್ಳಲು ಕರ್ನಾಟಕ  ಪಂಚಾಯತ್ ರಾಜ್ ಇಲಾಖೆ ಮತ್ತು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ (KSRLPS) ರವರಿಂದ ಗ್ರಾಮ ಪಂಚಾಯಿತಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. 

 

ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ, ಮೈಸೂರು (ANSSIRD & PR) ಮತ್ತು ಮಹಾತ್ಮಾ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ದಿ ಸಂಸ್ಥೆ (MGIRED) ಘನ ತ್ಯಾಜ್ಯ ನಿರ್ವಹಣೆಯಲ್ಲಿ ಒಳಗೊಂಡಿರುವ ಪ್ರಕ್ರಿಯೆಗಳನ್ನು ಅರ್ಥಮಾಡಿಕೊಳ್ಳಲು GPLF ಗಳಿಗೆ 5 ದಿನಗಳ ತರಬೇತಿಯನ್ನು ನೀಡುತ್ತಿವೆ. ಉತ್ತಮ ಕಲಿಕೆಗಾಗಿ ತರಬೇತಿಯಲ್ಲಿ  ಕ್ಷೇತ್ರ ಭೇಟಿಗೂ ಅವಕಾಶ ಮಾಡಲಾಗಿದೆ.  

 

ಜಿಪಿಎಲ್‌ಎಫ್‌ನ ಮಹಿಳೆಯರಿಗೆ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಗಾಗಿ ವಾಹನ ಚಾಲನಾ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ ಮತ್ತು ಗ್ರಾ.ಪಂ. ವ್ಯಾಪ್ತಿಯಲ್ಲಿ ಮೂಲದಿಂದ ತ್ಯಾಜ್ಯವನ್ನು ಸಂಗ್ರಹಿಸಲು ಬಳಸುವ ಸ್ವಚ್ಛತಾ ವಾಹಿನಿಯ ಚಾಲನೆಯಲ್ಲಿ ಮಹಿಳೆಯರನ್ನು ತೊಡಗಿಸಿಕೊಳ್ಳಲಾಗುತ್ತಿದೆ. ಜಿಲ್ಲಾ ಪಂಚಾಯತಿ ಮೂಲಕ ಉಚಿತ ವಾಹನ ತರಬೇತಿ ನೀಡುವುದಲ್ಲದೆ, ವಾಹನ ಚಾಲನ ಪರವಾನಗಿ ಪಡೆಯಲು ಸಹಕರಿಸಲಾಗಿದೆ. 

 

ಈ ಮಾದರಿಯಿಂದ ಮಹಿಳಾ ಸಬಲೀಕರಣ ಮತ್ತು ಪರಿಸರ ಸುಸ್ಥಿರತೆಯ ಎರಡು ಉದ್ದೇಶಗಳನ್ನು ಸಾಧಿಸಲು ಉಪಕ್ರಮಿಸಲಾಗಿದೆ. ಈ ರೀತಿಯ ಘನ ತ್ಯಾಜ್ಯ ಸಂಗ್ರಹಣೆ ಮತ್ತು ಸಂಸ್ಕರಣೆಯ ವ್ಯವಸ್ಥೆಯ ಅನುಪಸ್ಥಿತಿಯಲ್ಲಿ ಸಾಮಾನ್ಯವಾಗಿ ಹಳ್ಳಿಗಳಲ್ಲಿ ತ್ಯಾಜ್ಯವನ್ನು ಸುಡಲಾಗುತ್ತದೆ, ಇದು ವಿಷಕಾರಿ ಅನಿಲಗಳನ್ನು ಹೊರಸೂಸುತ್ತದೆ, ಅಥವಾ ಬಯಲು, ಚರಂಡಿಗಳು, ನೀರಿನ ಮೂಲಗಳು ಇತ್ಯಾದಿಗಳಲ್ಲಿ ಘನ ತ್ಯಾಜ್ಯ ಶೇಖರಣೆಯಾಗುತ್ತದೆ. ಈಗ ತ್ಯಾಜ್ಯವನ್ನು ಸರಿಯಾಗಿ ಸಂಗ್ರಹಿಸಿ ಬೇರ್ಪಡಿಸಲಾಗುತ್ತಿದೆ ಮತ್ತು ಸಂಸ್ಕರಣೆಗಾಗಿ ವಿಲೇವಾರಿ ಮಾಡಲಾಗುತ್ತಿದೆ.

 

ಘನ ತ್ಯಾಜ್ಯ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಒಪ್ಪಂದದ ಪ್ರಕ್ರಿಯೆಯ ಮೂಲಕ ಜಿಪಿಎಲ್‌ಎಫ್‌ಗಳಿಂದ  ಪ್ರಾರಂಭಿಸಿದ ಸಮಯದಿಂದ ಸ್ವ-ಸಹಾಯ ಗುಂಪುಗಳು ತಮ್ಮ ಸಮುದಾಯದ ತ್ಯಾಜ್ಯವನ್ನು ವಿಲೇವಾರಿ ಮಾಡಿ ಸ್ವಚ್ಛ ಮತ್ತು ಆರೋಗ್ಯಕರ ಗ್ರಾಮ ಪಂಚಾಯಿತಿಗಳನ್ನಾಗಿ ಮಾಡಲು ಶ್ರಮಿಸುತ್ತಿದ್ದು, ಈ ವಲಯದಲ್ಲಿ ಸ್ವ-ಸಹಾಯ ಗುಂಪುಗಳು ಮಾಡಿದ ಕೆಲಸಗಳು ರಾಜ್ಯದ ಇತರೆ ಸ್ವ-ಸಹಾಯ ಗುಂಪುಗಳಿಗೆ ಮಾದರಿ ಹಾಗೂ ಉತ್ತೇಜನಕಾರಿಯಾಗಿದೆ.

ಇತ್ತೀಚಿನ ನವೀಕರಣ​ : 25-11-2022 06:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080